ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ ಎ.ಐ. ಇಂಪ್ಯಾಕ್ಟ್ ಶೃಂಗಸಭೆ 2026ರಲ್ಲಿ ಭಾಗವಹಿಸಿದ್ದ ಲಿಚ್ಟೆನ್‌ಸ್ಟೈನ್ ದೇಶದ ರಾಜಕುಮಾರ ಶ್ರೀ ಅಲೋಯಿಸ್ ಫಿಲಿಪ್ ಮಾರಿಯಾ ಅವರಿಗೆ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ಆತ್ಮೀಯವಾಗಿ ಬೀಳ್ಕೊಟ್ಟರು.
ಜೊತೆಗೆ ಸ್ಲೋವಾಕ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಪೀಟರ್ ಪೆಲ್ಲೆಗ್ರಿನಿ ಅವರನ್ನು ನವದೆಹಲಿಯ ಪಾಲಮ್‌ನಲ್ಲಿರುವ ವಾಯುಸೇನಾ ಕೇಂದ್ರದಲ್ಲಿಂದು ಸಚಿವರಾದ ಶ್ರೀ ವಿ. ಸೋಮಣ್ಣ ಅವರು ಬೀಳ್ಕೊಟ್ಟರು.
ಈ ಸಂದರ್ಭದಲ್ಲಿ ಈ ಎರಡು ದೇಶದ ಗಣ್ಯರನ್ನು ಬೀಳ್ಕೊಟ್ಟು, ಕೇಂದ್ರ ಸಚಿವರು ಅತ್ಯಂತ ಸಂತಸ ವ್ಯಕ್ತಪಡಿಸಿದ್ದು, ಶೃಂಗಸಭೆಯಲ್ಲಿ ಅವರ ಉಪಸ್ಥಿತಿಯು ಜಾಗತಿಕ ಸಹಯೋಗ ಮತ್ತು ನಾವೀನ್ಯತೆಯ ಮನೋಭಾವವನ್ನು ಮತ್ತಷ್ಟು ಬಲಪಡಿಸಿತು. ಕೃತಕ ಬುದ್ಧಿಮತ್ತೆ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಭಾರತದ ನಾಯಕತ್ವವನ್ನು ಕೇಂದ್ರ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ಈ ಸಂದರ್ಭದಲ್ಲಿ ಸ್ಮರಿಸಿದರು.
Source : PIB

