ಕೇಂದ್ರ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ಆಂಟೋನಿಯಾ ಗುಟೇರಸ್ ಅವರೊಂದಿಗೆ ಚರ್ಚೆ ನಡೆಸಿದರು

0
3

ಜಾಗತಿಕ ಎಐ ಶೃಂಗಸಭೆ ಹಿನ್ನೆಲೆಯಲ್ಲಿ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವರಾದ ಶ್ರೀ ವಿ. ಸೋಮಣ್ಣ ಅವರು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ಆಂಟೋನಿಯಾ ಗುಟೇರಸ್ ಅವರೊಂದಿಗೆ ಅರ್ಥಪೂರ್ಣ ಚರ್ಚೆ ನಡೆಸಿದರು. 

ಕೃತಕ ಬುದ್ಧಿಮತ್ತೆಯ ಕುರಿತು ಜಾಗತಿಕ ವೈಜ್ಞಾನಿಕ ಪ್ಯಾನೆಲ್ ರಚಿಸುವ ಅವರ ಯೋಜನೆಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ದೃಷ್ಟಿಕೋನವು ವಿಶ್ವಸಂಸ್ಥೆಯ ತತ್ವಕ್ಕೆ ಅನುಗುಣವಾಗಿದ್ದು, ‘ಮಾನವೀಯತೆಯ ಕಲ್ಯಾಣ’ವನ್ನು ಉತ್ತೇಜಿಸುತ್ತದೆ. ಜಾಗತಿಕ ಎಐ ಶೃಂಗಸಭೆಯಲ್ಲಿ ಭಾಗವಹಿಸುವುದರ ಜೊತೆಗೆ, ಅವರು ನವದೆಹಲಿಯಲ್ಲಿ ಭಗವಾನ್ ಬುದ್ಧನಿಗೆ ಸಂಬಂಧಿಸಿದ ಪವಿತ್ರ ಪಿಪ್ರಹ್ವಾ ಅವಶೇಷಗಳ ಅಂತಾರಾಷ್ಟ್ರೀಯ ಪ್ರದರ್ಶನಕ್ಕೆ ಭೇಟಿ ನೀಡಿದರು ಎಂದು ಸಚಿವರು ತಿಳಿಸಿದ್ದಾರೆ.

Source : PIB